ಭದ್ರಾವತಿ, ಜು. ೨೮: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳವಾರ ಒಂದೇ ದಿನ ೭ ಪ್ರಕರಣಗಳು ದಾಖಲಾಗಿವೆ.
ಗಾಂಧಿನಗರದಲ್ಲಿ ೪೩ ವರ್ಷದ ವ್ಯಕ್ತಿ, ಹೊಸಬುಳ್ಳಾಪುರದಲ್ಲಿ ೩೪ ವರ್ಷದ ವ್ಯಕ್ತಿ, ಮಾಚೇನಹಳ್ಳಿ ೩೫ ವರ್ಷ ವ್ಯಕ್ತಿ, ಹೊಸಮನೆ ವಿಜಯನಗರದಲ್ಲಿ ೩೦ ವರ್ಷದ ವ್ಯಕ್ತಿ, ಹುತ್ತಾ ಕಾಲೋನಿಯಲ್ಲಿ ೩೬ ವರ್ಷದ ವ್ಯಕ್ತಿ ಹಾಗೂ ಕೂಡ್ಲಿಗೆರೆ ಗ್ರಾಮದಲ್ಲಿ ೩೧ ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆಯಲ್ಲಿ ೩ ಮಂದಿಗೆ ಸೋಂಕು:
ತಾಲೂಕಿನ ಭದ್ರಾವತಿ ಉಪ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೩ ಮಂದಿಗೆ ಸೋಂಕು ತಗುಲಿದೆ. ಕೆಲವು ದಿನಗಳ ಹಿಂದೆ ತಳ್ಳಿಕಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಾರ್ಡ್‌ಯೊಬ್ಬರಿಗೆ ಸೋಂಕು ತಗುಲಿತ್ತು. ಇದೀಗ ಕೊರಲಕೊಪ್ಪ ಸಸ್ಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಹಾಗೂ ಕೂಡ್ಲಿಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಸೋಂಕು ತಗುಲಿದೆ.
ಕಛೇರಿ ಸೀಲ್‌ಡೌನ್ ಮಾಡಿಲ್ಲ:
ಅರಣ್ಯ ಇಲಾಖೆಯ ೩ ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರು ವಲಯ ಅರಣ್ಯಾಧಿಕಾರಿಗಳ ಕಛೇರಿಗೆ ಬಂದು ಹೋಗಿರುತ್ತಾರೆ. ಆದರೂ ಸಹ ಇದುವರೆಗೂ ಕಛೇರಿಯನ್ನು ಸೀಲ್‌ಡೌನ್ ಮಾಡಿಲ್ಲ. ಅಲ್ಲದೆ ಸ್ಯಾನಿಟೈಜರ್ ಸಹ ಕೈಗೊಂಡಿಲ್ಲ. ಇದರಿಂದಾಗಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇತರೆ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.
No comments:
Post a Comment