ಆಶಾ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿಗಳಿಗೆ ಮನವಿ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ೧೫ನೇ ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಹಾಗೂ ಜು.೨೯ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ನಡೆಸುವ ಸಂಬಂಧ ಶುಕ್ರವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೨೪: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ೧೫ನೇ ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಹಾಗೂ ಜು.೨೯ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ನಡೆಸುವ ಸಂಬಂಧ ಶುಕ್ರವಾರ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೨ ಸಾವಿರ ರು. ಗೌರವ ಧನ, ಕೋವಿಡ್-೧೯ರ ವಿರುದ್ಧ ಹೋರಾಟ ನಡೆಸಲು ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಆಗ್ರಹಿಸಿದರು.
ಕಳೆದ ಸುಮಾರು ೨ ತಿಂಗಳಿನಿಂದ ನಿರಂತರವಾಗಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುತ್ತಿದೆ. ತಕ್ಷಣ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಎಸ್. ಆಶಾ, ವಿ. ಲಕ್ಷ್ಮಿ, ಕೆ.ಸಿ ಕಲ್ಪನಾ, ಕವಿತ, ನೀಲಾಂಬಿಕ, ಬಿ. ಮಂಜುಳ, ಎಸ್. ಶಾಂತಿ, ಆರ್. ನಾಗರತ್ನಬಾಯಿ, ಶಕೀಲಬಾನು, ಮಂಗಳಮ್ಮ, ಯಶಸ್ವಿನಿ, ಎಚ್. ನೇತ್ರಾವತಿ, ಪಿ. ಶೃತಿ, ಕೆ. ಹೇಮಾವತಿ, ಆರ್. ಮಂಜುಳ, ಫಜಲುನ್ನಿಸಾ, ಎಸ್. ಮಮತ, ರಮೀಜಾ, ಎಂ. ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment