ಭದ್ರಾವತಿ ನಗರಸಭೆ ವತಿಯಿಂದ ಕೋವಿಡ್-೧೯ರ ನಗರ ಟಾಕ್ಸ್ ಫೋರ್ಸ್ ಕಾರ್ಯಪಡೆ ಸದಸ್ಯರಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಆನ್‌ಲೈನ್ ತರಬೇತಿ ಕಾರ್ಯಾಗಾರವನ್ನು ಶಿವಮೊಗ್ಗ ಅಭಿವೃದ್ಧಿ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ಉದ್ಘಾಟಿಸಿದರು.
ಭದ್ರಾವತಿ, ಜು. ೨೦: ನಗರಸಭೆ ವತಿಯಿಂದ ಕೋವಿಡ್-೧೯ರ ನಗರ ಟಾಕ್ಸ್ ಫೋರ್ಸ್ ಕಾರ್ಯಪಡೆ ಸದಸ್ಯರಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಆನ್‌ಲೈನ್ ತರಬೇತಿ ಕಾರ್ಯಾಗಾರವನ್ನು ಶಿವಮೊಗ್ಗ ಅಭಿವೃದ್ಧಿ ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಾಳಿ ಉದ್ಘಾಟಿಸಿದರು.
ಹಳೇನಗರದ ವೀರಭದ್ರೇಶ್ವರ ಚಿತ್ರ ಮಂದಿರ, ನಗರಸಭೆ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣ ಹಾಗೂ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಭದ್ರಾವತಿ ನಗರಸಭೆ ವತಿಯಿಂದ ಕೋವಿಡ್-೧೯ರ ನಗರ ಟಾಕ್ಸ್ ಫೋರ್ಸ್ ಕಾರ್ಯಪಡೆ ಸದಸ್ಯರಿಗೆ ಸೋಮವಾರ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆನ್‌ಲೈನ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಸಮುದಾಯದಲ್ಲಿ ಕೋವಿಡ್-೧೯ ಯಶಸ್ವಿಯಾಗಿ ನಿರ್ವಹಿಸಲು ಅನುಸರಿಸಬೇಕಾದ ಪ್ರಮುಖ ಕ್ರಮಗಳು, ಸೋಂಕಿಗೆ ಒಳಗಾದವರನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸುವುದು. ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳು ಹಾಗೂ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಇತ್ಯಾದಿ ವಿಷಯಗಳನ್ನು ಕಾರ್ಯಾಗಾರದಲ್ಲಿ ಆನ್‌ಲೈನ್ ಮೂಲಕ ತಿಳಿಸಿಕೊಡಲಾಯಿತು.
ಭದ್ರಾವತಿ ನಗರಸಭೆ ವತಿಯಿಂದ ಕೋವಿಡ್-೧೯ರ ನಗರ ಟಾಕ್ಸ್ ಫೋರ್ಸ್ ಕಾರ್ಯಪಡೆ ಸದಸ್ಯರಿಗೆ ಸೋಮವಾರ ನಗರಸಭೆ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆನ್‌ಲೈನ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ ಮತ್ತು ಕಂದಾಯಾಧಿಕಾರಿ ರಾಜ್‌ಕುಮಾರ್ ನೇತೃತ್ವದಲ್ಲಿ ೩ ಕಡೆ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು. ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಟಾಕ್ಸ್ ಫೋರ್ಸ್ ಕಾರ್ಯಪಡೆ ಸದಸ್ಯರು ಪಾಲ್ಗೊಂಡಿದ್ದರು.
No comments:
Post a Comment