ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೊಂದ ಪೋಷಕರಿಂದ ದೂರು
ಭದ್ರಾವತಿ ನ್ಯೂಟೌನ್ ಭಾಗದ ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ಪೋಷಕರಿಗೆ ಬಲವಂತವಾಗಿ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿದ್ದು, ಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಂಯುಕ್ತ ಜನಾತದಳ ರಾಜ್ಯ ಯುವ ಮುಖಂಡ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ನೊಂದ ಪೋಷಕರಿಂದ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೨೦: ನಗರದ ನ್ಯೂಟೌನ್ ಭಾಗದ ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ಪೋಷಕರಿಗೆ ಬಲವಂತವಾಗಿ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿದ್ದು, ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ಬಲವಂತವಾಗಿ ಶುಲ್ಕ ವಸೂಲಾತಿ ಮಾಡುವುದು ಸರಿಯಲ್ಲ. ಈ ಸಂಬಂಧ ಸರ್ಕಾರ ಸಹ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಂಯುಕ್ತ ಜನಾತದಳ ರಾಜ್ಯ ಯುವ ಮುಖಂಡ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ನೊಂದ ಪೋಷಕರಿಂದ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರಸ್ತುತ ವಿಶ್ವದೆಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಲಾಕ್‌ಡೌನ್ ಪರಿಣಾಮ ಯಾವುದೇ ಉದ್ಯೋಗ, ವಹಿವಾಟು ಇಲ್ಲದೆ ಆರ್ಥಿಕ ಸಂಕಷ್ಟ ಎದುರಾಗಿದೆ. ಶ್ರೀಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ನ್ಯೂಟೌನ್ ಸೆಂಟ್‌ಚಾರ್ಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಕರೆ ಮಾಡಿ ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ಆರೋಪಿಸಲಾಯಿತು.
ಈ ಹಿಂದೆ ನಗರದಲ್ಲಿ ಖಾಸಗಿ ಶಾಲೆಗಳು ಬಲವಂತದಿಂದ ಶುಲ್ಕ ವಸೂಲಾತಿ ಮಾಡದಿರುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಸಹ ಖಾಸಗಿ ಶಾಲೆಗಳು ಶುಲ್ಕ ವಸೂಲಾತಿ ಮಾಡುತ್ತಿವೆ. ತಕ್ಷಣ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಜು.೨೭ರಿಂದು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಲಾಯಿತು.
ನೊಂದ ಪೋಷಕರಾದ ಡಿ. ಮಂಜುನಾಥ್, ನಾಗರಾಜು, ಮಧುಸೂದನ್, ಶಿವಕುಮಾರ್ ಮತ್ತು ಸತೀಶ್, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment