ಬೆಳಿಗ್ಗೆ ೨, ರಾತ್ರಿ ೫ ಒಂದೇ ದಿನ ೭ ಪ್ರಕರಣಗಳು ಪತ್ತೆ
ಭದ್ರಾವತಿ ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಮೊದಲ ಹಂತವಾಗಿ ಇದೀಗ ಸೋಮವಾರದಿಂದ ಪುನಃ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ.
ಭದ್ರಾವತಿ, ಜು. ೧೩: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಮೊದಲ ಹಂತವಾಗಿ ಇದೀಗ ಸೋಮವಾರದಿಂದ ಪುನಃ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ.
ತಾಲೂಕಿನ ಬಹುತೇಕ ಪ್ರಕರಣಗಳಲ್ಲಿ ಹೊರಗಿನಿಂದ ಬಂದವರಿಂದ ಸೋಂಕು ಹರಡುತ್ತಿರುವುದು ಕಂಡು ಬರುತ್ತಿದೆ. ಲಾಕ್‌ಡೌನ್ ಸಡಿಲಗೊಂಡ ನಂತರ ಬೆಂಗಳೂರು, ಮೈಸೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಚೆಕ್ ಪೋಸ್ಟ್‌ಗಳಲ್ಲಿ ತಾಲೂಕಿಗೆ ಆಗಮಿಸುವ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಪ್ರಸ್ತುತ ಕಾರೇಹಳ್ಳಿ, ಹಂಚಿನ ಸಿದ್ದಾಪುರ ಚೆಕ್ ಪೋಸ್ಟ್‌ಗಳು ಕಾರ್ಯಾರಂಭಗೊಂಡಿವೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಚೆಕ್ ಪೋಸ್ಟ್‌ಗಳಲ್ಲಿ ಬೀಡುಬಿಟ್ಟಿದ್ದು, ಮತ್ತಷ್ಟು ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ಚೆಕ್ ಪೋಸ್ಟ್‌ಗಳ ಪರಿಶೀಲನೆ ನಡೆಸಿದರು.
ಒಂದೇ ದಿನ ೭ ಸೋಂಕು ಪತ್ತೆ:
ಭಾನುವಾರ ಒಂದೇ ದಿನ ೭ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಬೆಳಿಗ್ಗೆ ೨, ರಾತ್ರಿ ೫ ಪ್ರಕರಣಗಳು ಪತ್ತೆಯಾಗಿವೆ. ಭೋವಿ ಕಾಲೋನಿಯಲ್ಲಿ ೫೮ ವರ್ಷದ ವ್ಯಕ್ತಿಗೆ, ಹುತ್ತಾ ಕಾಲೋನಿ ಚಂದ್ರಾಲಯ ಬಳಿ ೬೦ ವರ್ಷದ ವ್ಯಕ್ತಿಗೆ, ತರೀಕೆರೆ ರಸ್ತೆಯಲ್ಲಿ ೧೯ ವರ್ಷದ ಯುವಕನಿಗೆ, ಆನವೇರಿ ಬಳಿ ಇಟ್ಟಿಗೆಹಳ್ಳಿಯಲ್ಲಿ ೩೦ ವರ್ಷ ಮಹಿಳೆಗೆ ಹಾಗೂ ಹೊಳೆಹೊನ್ನೂರು ಪೇಟೆ ಬೀದಿಯಲ್ಲಿ ೩೨ ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸೋಂಕು ಪ್ರಕರಣಗಳು ಪತ್ತೆಯಾದ ಸ್ಥಳದ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಘೋಷಿಸಲಾಗಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಪ್ರದೇಶಗಳ ಸಂಖ್ಯೆ ಏರಿಕೆಯಾಗುತ್ತಿವೆ.
No comments:
Post a Comment