ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು ರೈತರೊಂದಿಗೆ ಭತ್ತದ ನಾಟಿಯಲ್ಲಿ ತೊಡಗುವ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಭದ್ರಾವತಿ, ಜು. ೩೦: ಹಲವಾರು ಸೇವಾ ಕಾರ್ಯಗಳೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿರುವ ರೋಟರಿ ಕ್ಲಬ್ ರೈತರ ನೆರವಿಗೂ ಮುಂದಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹಲವಾರು ವರ್ಷಗಳಿಂದ ರೈತ ಮಿತ್ರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ.
ಈ ಬಾರಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ಕ್ಲಬ್‌ನ ಪದಾಧಿಕಾರಿಗಳು ರೈತರೊಂದಿಗೆ ಭತ್ತದ ನಾಟಿಯಲ್ಲಿ ತೊಡಗುವ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕ್ಲಬ್ ಅಧ್ಯಕ್ಷ ಬಿ.ಎಂ. ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಿರೀಶ್, ವಲಯ ಪ್ರತಿನಿಧಿ ಡಾ. ಕೆ. ನಾಗರಾಜ್, ಸುಂದರ್ ಬಾಬು ಹಾಗೂ ಸ್ಥಳೀಯ ಪುರುಷ ಹಾಗೂ ಮಹಿಳಾ ರೈತರು ಉಪಸ್ಥಿತರಿದ್ದರು.
No comments:
Post a Comment