ಡಾ. ಸುಭದ್ರಮ್ಮ ಮನ್ಸೂರ್
ಭದ್ರಾವತಿ, ಜು. ೧೬: ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್‌ರವರ ನಿಧನಕ್ಕೆ ನಗರದ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ.
ಡಾ. ಸುಭದ್ರಮ್ಮ ಮನ್ಸೂರ್‌ರವರು ಪೌರಾಣಿಕ ಪಾತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸಿದ್ದು, ಪ್ರಮುಖವಾಗಿ ಹೇಮರೆಡ್ಡಿ ಮಲ್ಲಮ್ಮ, ಅಕ್ಕಮಹಾದೇವಿ ಪಾತ್ರಗಳು ಹೆಚ್ಚು ಗಮನ ಸೆಳೆಯುತ್ತವೆ. ಇವರ ಅಮೋಘ ಗಾಯನ ಇದೀಗ ನೆನಪಾಗಿ ಉಳಿದುಕೊಂಡಿದೆ. ರಂಗಜ್ಯೋತಿಯನ್ನು ಕಳೆದುಕೊಂಡು ನಾಡು ಬಡವಾಗಿದೆ ಇವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲೆಂದು ಶಾಂತಲಾ ಕಲಾ ವೇದಿಕೆಯ ಹಿರಿಯ ರಂಗದಾಸೋಹಿ ಎಸ್.ಜಿ ಶಂಕರಮೂರ್ತಿ ಪ್ರಾರ್ಥಿಸಿದ್ದಾರೆ.
ಅದ್ಭುತ ಪ್ರತಿಭಾವಂತ ಕಲಾವಿದೆಯನ್ನು ಕಳೆದುಕೊಂಡು ರಂಗಭೂಮಿಗೆ ತುಂಬಲಾರದ ನಷ್ಟ ಉಂಟಾಗಿದೆ. ಇವರ ಅಭಿಮಾನಿಗಳಿಗೆ, ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಕಲಾವಿದ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಪ್ರಾರ್ಥಿಸಿದ್ದಾರೆ.
ನಗರದ ಹಲವು ರಂಗ ಸಂಸ್ಥೆಗಳು, ಕಲಾವಿದರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment