ಭದ್ರಾವತಿ, ಆ. ೨೯: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಆ.೩೧ರಂದು ಸಂಜೆ ೪ ಗಂಟೆಗೆ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಹಾಗು ರಾಮಕೃಷ್ಣ ಹೆಗಡೆಯವರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಮುಂಭಾಗದ ಶ್ರೀ ಸರಸ್ಪತಿ ಕಾಂಪ್ಲೆಕ್ಸ್ ಮಹಡಿಯಲ್ಲಿರುವ ಸಂಘದ ಕಛೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಟ್ರಸ್ಟ್ ಛೇರ‍್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕೋರಿದ್ದಾರೆ.
No comments:
Post a Comment