ಭದ್ರಾವತಿ, ಆ. ೯: ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿಯಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಆಡಿ ಕೃತ್ತಿಕಾ ಕಾವಡಿ ಜಾತ್ರಾ ಮಹೋತ್ಸವ ಈ ಬಾರಿ ರದ್ದುಗೊಳಿಸಲಾಗಿದೆ.
ಈ ಕುರಿತು ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ಆಶ್ರಮದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಬಾರಿ ಕೊರೋನ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಆ.೧೧ ಮತ್ತು ೧೨ರಂದು ಎರಡು ದಿನಗಳ ಕಾಲ ಜರುಗಬೇಕಿದ್ದ ಜಾತ್ರಾ ಮಹೋತ್ಸವ ಈ ಬಾರಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ.
ಇದೆ ರೀತಿ ನ್ಯೂಟೌನ್ ಆಂಜನೇಯ ಆಗ್ರಹಾರದ ಕೂಲಿಬ್ಲಾಕ್ ಶೆಡ್‌ನಲ್ಲಿರುವ ಶ್ರೀ ಶಿವಸುಬ್ರಮಣ್ಯಸ್ವಾಮಿ ಕಾವಡಿ ಟ್ರಸ್ಟ್ ವತಿಯಿಂದ ಸಹ ಈ ಬಾರಿ ಆಡಿ ಕೃತ್ತಿಕಾ ಕಾವಡಿ ಜಾತ್ರಾ ಮಹೋತ್ಸವ ರದ್ದು ಪಡಿಸಲಾಗಿದ್ದು, ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸದೆ ತಮ್ಮ ಮನೆಗಳಲ್ಲಿಯೇ ಶ್ರೀ ಸ್ವಾಮಿಯನ್ನು ಆರಾಧಿಸುವ ಮೂಲಕ ಸಹಕರಿಸಬೇಕೆಂದು ಕೋರಲಾಗಿದೆ.
No comments:
Post a Comment