ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಭದ್ರಾವತಿಯಲ್ಲಿ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೧೩: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಆ. ೧೧ರಂದು ನಡೆದಿರುವ ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಬಜರಂಗದಳ ವತಿಯಿಂದ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಏಕಾಏಕಿ ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಚ್ಚಿ ಕಂಡ ಕಂಡ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸುವ ಜೊತೆಗೆ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವುದು ಖಂಡನೀಯವಾಗಿದೆ. ಇದೊಂದು ಪೂರ್ವ ನಿಯೋಜಿತ ಗಲಭೆಯಾಗಿದ್ದು, ಸಾರ್ವಜನಿಕರಲ್ಲಿ ಭಯಭೀತಿ ಉಂಟುಮಾಡಿರುವ ಗಲಭೆಕೋರರನ್ನು ತಕ್ಷಣ ಬಂಧಿಸಬೇಕು. ಅಲ್ಲದೆ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಸ್‌ಡಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಲಾಯಿತು.
ತಾಲೂಕು ಸಂಯೋಜಕ ವಡಿವೇಲು ನೇತೃತ್ವ ವಹಿಸಿದ್ದರು. ನಗರ ಸಹ ಸಂಯೋಜಕ ಎಂ. ರಮೇಶ್, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Olleyadu
ReplyDeleteOlleya kelasakke ellaru ondagabeku on arannobbaru kalu eleuuva kelasakke agabaradu ,
ReplyDelete