ಭದ್ರಾವತಿ ತಾಲೂಕಿನ ಶ್ರೀ ರಾಮನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲಿಂಗರಾಜುರವರನ್ನು ಶುಕ್ರವಾರ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಆ. ೧೪: ತಾಲೂಕಿನ ಶ್ರೀ ರಾಮನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲಿಂಗರಾಜುರವರನ್ನು ಶುಕ್ರವಾರ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಲಿಂಗರಾಜುರವರು ತಮ್ಮ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಸಹಕಾರ ಸಂಘಕ್ಕೆ ಹಲವಾರು ಪ್ರಶಸ್ತಿಗಳನ್ನು ತಂದುಕೊಡುವ ಜೊತೆಗೆ ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಂಘ ಎಂಬ ಹೆಗ್ಗಳಿಕೆಗೆ ಕಾರಣಕರ್ತರಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್‌ರವರು ೧ ಲಕ್ಷ ರು. ಚೆಕ್ ವಿತರಿಸುವ ಜೊತೆಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿ ಅಭಿನಂದಿಸಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ರಾಮನಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment