ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ(ರ‍್ಯಾಮ್ಕೋಸ್)ದ ಭದ್ರಾವತಿ ತಾಲೂಕಿನ ಅರಹತೊಳಲು ಕೈಮರ ಶಾಖೆ ವತಿಯಿಂದ ಕೊರೋನಾ ವಾರಿರ್ಯಸ್‌ಗಳಾದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿ ಪ್ರೋತ್ಸಾಹ ಧನ ಸಹಾಯದೊಂದಿಗೆ ಅಭಿನಂದಿಸಲಾಯಿತು.
ಭದ್ರಾವತಿ, ಆ. ೧೦: ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ(ರ‍್ಯಾಮ್ಕೋಸ್)ದ ತಾಲೂಕಿನ ಅರಹತೊಳಲು ಕೈಮರ ಶಾಖೆ ವತಿಯಿಂದ ಕೊರೋನಾ ವೈರಸ್ ನಿರ್ಮೂಲನೆಗೆ ಶ್ರಮಿಸುತ್ತಿರುವ ಕೊರೋನಾ ವಾರಿರ್ಯಸ್‌ಗಳಾದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿ ಪ್ರೋತ್ಸಾಹ ಧನ ಸಹಾಯದೊಂದಿಗೆ ಅಭಿನಂದಿಸಲಾಯಿತು.
ಆಶಾ ಕಾರ್ಯಕರ್ತೆಯರಾದ ಎಂ. ಭಾರತಮ್ಮ. ಸುಕನ್ಯ ಮತ್ತು ವಿಜಯಕುಮಾರಿ ಅವರಿಗೆ ತಲಾ ೩ ಸಾವಿರ ರು. ಪ್ರೋತ್ಸಾಹ ಧನ ನೀಡುವ ಮೂಲಕ ಸನ್ಮಾನಿಸಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಮಲ್ಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಎಂ.ಪರಮೇಶ್ವರಪ್ಪ, ಆಡಳಿತಾಧಿಕಾರಿ ಎಂ. ವಿರುಪಾಕ್ಷಪ್ಪ, ಶಾಖಾ ವ್ಯವಸ್ಥಾಪಕ ಡಿ. ಶಂಕರಮೂರ್ತಿ, ಸಿಬ್ಬಂದಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment