ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದು, ಈ ಹಿನ್ನಲೆಯಲ್ಲಿ ಈ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.
ಭದ್ರಾವತಿ, ಆ. ೧೭: ವಿದ್ಯಾರ್ಥಿನಿಯರು ಯಾವುದೇ ಕಾರಣಕ್ಕೂ ಶಿಕ್ಷಣ ಮೊಟಕುಗೊಳಿಸಬಾರದು. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕೆಂದು ನಗರದ ನ್ಯೂಟೌನ್ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಉಪಪ್ರಾಚಾರ್ಯರಾದ ಟಿ.ಎಸ್ ಸುಮನಾ ಹೇಳಿದರು.
ಅವರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಸುಶಿಕ್ಷಿತ ಮತ್ತು ಸುಸಂಸ್ಕೃತ ವಿದ್ಯಾರ್ಥಿಗಳು ಮಾತ್ರವೇ ಆರೋಗ್ಯಕರ ಸಮಾಜ ಮತ್ತು ದೇಶವನ್ನು ನಿರ್ಮಿಸಬಲ್ಲರು. ಈ ಹಿನ್ನಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂದರು.
ಪಿ. ಸ್ಪರ್ಶ, ಎಚ್.ಎಸ್ ಪ್ರೀತಿ, ಸಿ. ವಾತ್ಸಲ್ಯ ಸಿ. ಜೋಗಿ, ಕೆ. ಪ್ರೇರಣಾ, ಜ್ಞಾನಾಮೃತ ಸೇರಿದಂತೆ ಒಟ್ಟು ೧೧ ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕಗಳನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದುಕೊಂಡಿದ್ದಾರೆ.
ವಿಶೇಷವಾಗಿ ಈ ವಿದ್ಯಾರ್ಥಿನಿಯರ ಸವಿ ನೆನಪಿಗಾಗಿ ಇವರ ಹೆಸರಿನಲ್ಲಿ ಶಾಲಾ ಆವರಣದಲ್ಲಿ ಒಂದೊಂದು ಸಸಿಗಳನ್ನು ನೆಡಲಾಯಿತು. ಶಿಕ್ಷಕರಾದ ಎಂ.ಬಿ ಮಂಜುನಾಥ್, ಮೆಹಬೂಬ್ ಆಲಿ ಖಾನ್, ಸತ್ಯನಾರಾಯಣ ಭಟ್, ಟಿ.ಎಲ್ ಸುಬ್ರಾಯ, ಗಾಯತ್ರಿ ಹೆಗಡೆ ಸೇರಿದಂತೆ ಇನ್ನಿತರರಿಗೆ ಕೃತಜ್ಞತೆ ಸಲ್ಲಿಸಲಾಯಿತು.
No comments:
Post a Comment