ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಕೈಗೊಳ್ಳಲಾಯಿತು.
ಭದ್ರಾವತಿ, ಆ. ೫: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬುಧವಾರ ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಜರುಗಿತು.
ಬೆಳಿಗ್ಗೆ ಪಂಚಾಮೃತ ಅಭಿಷೇಕದೊಂದಿಗೆ ರಾಯರ ಬೃಂದಾವನ, ಮುಖ್ಯ ಪ್ರಾಣ ದೇವರಿಗೆ ಮತ್ತು ಶ್ರೀ ವಾದಿರಾಜರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.
ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ ಬೃಂದಾವನಕ್ಕೆ ಪುಷ್ಪಾಲಂಕಾರ ಕೈಗೊಳ್ಳಲಾಯಿತು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸದ ಹಿನ್ನಲೆಯಲ್ಲಿ ಮಠದಲ್ಲಿ ಚಂಡೆವಾದ್ಯ ಸೇವೆ ನಡೆಸಿ ಜೈ ಶ್ರಿರಾಮ್ ಘೋಷಣೆ ಕೂಗುವ ಮೂಲಕ ಭಕ್ತರು ಸಂಭ್ರಮಿಸಿದರು.
ವೇದಬ್ರಹ್ಮ ಗೋಪಾಲಚಾರ್, ಮಠದ ಪ್ರಮುಖರಾದ ಮುರಳೀಧರ ತಂತ್ರಿ, ರಮಾಕಾಂತ, ಸತ್ಯನಾರಾಂiiಣಾಚಾರ್, ನಿರಂಜನ್, ಶ್ರೀಪತಿ, ಮಾಧವರಾವ್, ಚೌತಾಯ್ ಗುರುರಾಜ್, ಜಯತೀರ್ಥ, ಸುಧೀಂದ್ರರಾವ್, ಶಶಿ, ಪ್ರಮೋದ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment