ಏಕಾಏಕಿ ಕಾರ್ಯಾಚರಣೆಯಿಂದ ಬೆಳೆ ನಾಶ : ಆರೋಪ
ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ಸಂಜೆ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆದಿದೆ.
ಭದ್ರಾವತಿ: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ಸಂಜೆ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆದಿದೆ.
ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. ೨೯(ಹಳೇ ಸರ್ವೆ ನಂ.೧೪)ರ ಗೋಮಾಳ ಜಾಗದಲ್ಲಿ ಸ್ಮಶಾನ ನಿರ್ಮಾಣಕ್ಕೆ ಸರ್ಕಾರದಿಂದ ೧ ಎಕರೆ ೨೦ ಗುಂಟೆ ಜಮೀನು ಮಂಜೂರಾತಿಯಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಜು.೨೧ರಂದು ಸರ್ವೆ ಕಾರ್ಯ ನಡೆಸಲು ಗ್ರಾಮಕ್ಕೆ ತೆರಳಿದ್ದಾಗ ಗೋಮಾಳ ಒತ್ತುವರಿ ಮಾಡಿರುವ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಲಘು ಲಾಠಿ ಪ್ರಹಾರ ಸಹ ನಡೆದಿತ್ತು.
ಇದೀಗ ಏಕಾಏಕಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜಮೀನು ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದಾಗಿ ಜಮೀನು ಕಳೆದುಕೊಂಡ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಕಾರ್ಯಾಚರಣೆ ನಡೆಸಿರುವುದರಿಂದ ಹೆಚ್ಚಿನ ಹಾನಿ ಉಂಟಾಗಿದ್ದು, ಶುಂಠಿ, ಭತ್ತ, ಅಡಕೆ, ತೆಂಗಿನ ಬೆಳೆಗಳು ನಾಶವಾಗಿದೆ. ಅಲ್ಲದೆ ಒತ್ತುವರಿ ಕಾರ್ಯಾಚರಣೆಯಲ್ಲೂ ತಾರತಮ್ಯ ಮಾಡಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ಅವ್ರೆಲ ದೊಡವರು ಎನ್ನೇ ಮಾಡಿದರು ಸರಿ ಬುದ್ದಿ
ReplyDeleteಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯಿತು ಅನುವ ಗಾದೆ ಇಲ್ಲಿ ಅನ್ವಯ