ಲಾರಿ ವಶಕ್ಕೆ ಪಡೆದ ತಹಸೀಲ್ದಾರ ನೇತೃತ್ವದ ತಂಡ
ಭದ್ರಾವತಿಯಲ್ಲಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ನೇತೃತ್ವದ ತಂಡ ಪಡಿತರ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿರುವುದು.
ಭದ್ರಾವತಿ, ಆ. ೯: ಅಕ್ರಮವಾಗಿ ಪಡಿತರ ಆಹಾರ ಪದಾರ್ಥಗಳನ್ನು ಸಾಗಾಣೆ ಮಾಡಲಾಗುತ್ತಿದೆ ಎಂಬ ಅನುಮಾನದ ಮೇರೆಗೆ ಲಾರಿಯೊಂದನ್ನು ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ನೇತೃತ್ವದ ತಂಡ ವಶಕ್ಕೆ ಪಡೆದಿರುವ ಘಟನೆ ಭಾನುವಾರ ನಡೆದಿದೆ.
ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಲಾರಿಯನ್ನು ನಗರದ ಬಿಳಿಕಿ ಕ್ರಾಸ್‌ನಲ್ಲಿ ತಪಾಸಣೆ ನಡೆಸಲಾಗಿದ್ದು, ಸುಮಾರು ೫೦೦ ಚೀಲ ಪಡಿತರ ಅಕ್ಕಿ ಪತ್ತೆಯಾಗಿದೆ. ವಶಕ್ಕೆ ಪಡೆದಿರುವ ಲಾರಿ ನಂಬರಿಗೂ, ಬಿಲ್‌ನಲ್ಲಿರುವ ಲಾರಿ ನಂಬರಿಗೂ ವ್ಯತ್ಯಾಸ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ನ್ಯೂಟೌನ್ ಪೊಲೀಸರಿಗೆ ವಿಚಾರಣೆ ನಡೆಸಲು ಸೂಚಿಸಲಾಗಿದೆ.
No comments:
Post a Comment