ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ರೈತ ವರಿಷ್ಠ ಕೆ.ಟಿ ಗಂಗಾಧರ್ ನೇತೃತ್ವದಲ್ಲಿ ಬಾಗಿನ ಸಮರ್ಪಿಸಲಾಯಿತು.
ಭದ್ರಾವತಿ, ಆ. ೨೬: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಬಹುತೇಕ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಬಾಗಿನ ಸಮರ್ಪಿಸಲಾಯಿತು.
ಭದ್ರಾ ಜಲಾಶಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ರೈತ ಮುಖಂಡ, ವರಿಷ್ಠ ಕೆ.ಟಿ ಗಂಗಾಧರ್ ನೇತೃತ್ವವಹಿಸಿದ್ದರು.
ಪ್ರಮುಖರಾದ ಯಶವಂತರಾವ್ ಘೋರ್ಪಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಗೊಂದಿ ಜಯರಾಂ, ಮಂಜಪ್ಪ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment