ಕೇಂದ್ರ ಸರ್ಕಾರಿ ಸ್ವಾಮ್ಯದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಶನಿವಾರ ಸ್ವಚ್ಛತೆ, ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗಿತು.
ಭದ್ರಾವತಿ, ಆ. ೧೫: ಕೇಂದ್ರ ಸರ್ಕಾರಿ ಸ್ವಾಮ್ಯದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಶನಿವಾರ ಸ್ವಚ್ಛತೆ, ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗಿತು.
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಮಹಾಪ್ರಬಂಧಕ(ಸ್ಥಾವರ) ಸುರಜೀತ್ ಮಿಶ್ರಾ, ಪ್ರಭಾರಿ ಮಹಾ ಪ್ರಬಂಧಕ(ಸಿಬ್ಬಂದಿ ಮತ್ತು ಆಡಳಿತ) ಬಿ. ವಿಶ್ವನಾಥ್, ಹಿರಿಯ ಅಧಿಕಾರಿಗಳು, ಕಾರ್ಮಿಕರ ಸಂಘ ಹಾಗೂ ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ, ನಗರಾಡಳಿ ಮತ್ತು ರಕ್ಷಣಾ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
No comments:
Post a Comment