ಭದ್ರಾವತಿ ಕಾಗದನಗರ ಪೇಪರ್‌ಟೌನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬೇಲಿಮಲ್ಲೂರು ಎಂ. ನಾಗಪ್ಪ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಅವರನ್ನು ಸೋಮವಾರ ತಾಲೂಕು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಆ. ೩೧: ತಾಲೂಕಿನ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ಸೋಮವಾರ ತಾಲೂಕು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸುಮಾರು ೩೪ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಾಗದನಗರ ಎಂಪಿಎಂ ಶಿಕ್ಷಣ ಮಂಡಳಿಯ ಪೇಪರ್‌ಟೌನ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬೇಲಿಮಲ್ಲೂರು ಎಂ. ನಾಗಪ್ಪ, ಅರಬಿಳಚಿ ಬಸವೇಶ್ವರ ಪ್ರೌಢಶಾಲೆ ಸಹ ಶಿಕ್ಷಕ ದೇವೇಂದ್ರಪ್ಪ ಹಾಗೂ ನ್ಯೂಟೌನ್ ಸೇಂಟ್‌ಚಾರ್ಲ್ಸ್ ಕನ್ನಡ ಶಾಲೆಯ ಶಿಕ್ಷಕಿ ಜಾನಿ ಅವರನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸುವ ಮೂಲಕ ನಿವೃತ್ತಿ ಜೀವನಕ್ಕೆ ಶುಭ ಕೋರಲಾಯಿತು.
Happy retired Life,dear B.Nagappa.
ReplyDeleteK M Satheesh