ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಬುಧವಾರ ತಾಲೂಕಿನ ವಿವಿಧೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ನಡೆಸಿತು.
ಭದ್ರಾವತಿ, ಆ. ೧೯: ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಬುಧವಾರ ತಾಲೂಕಿನ ವಿವಿಧೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೩೦ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ನಗರದ ಸಿ.ಎನ್ ರಸ್ತೆ, ತರೀಕೆರೆ ರಸ್ತೆ ಸೇರಿದಂತೆ ವಿವಿಧೆಡೆ ಅಂಗಡಿ, ಮುಂಗಟ್ಟುಗಳು ಹಾಗೂ ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಲಾಗಿದ್ದು, ಒಟ್ಟು ೫,೪೦೦ ರು. ದಂಡ ವಸೂಲಾತಿ ಮಾಡಲಾಗಿದೆ. ಜೊತೆಗೆ ತಂಬಾಕು ಉತ್ಪನ್ನಗಳ ದುಷ್ಟರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ತಂಡದ ಕಾರ್ಯಾಚರಣೆಯಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಇ. ಕವಿತ.ಇ, ಬಿ.ಹೆಚ್.ಇ.ಓ ಮಧುಮತಿ, ಹಿರಿಯ ಆರೋಗ್ಯ ಸಹಾಯಕನೀಲೇಶ್ ರಾಜ್, ಕಿರಿಯ ಆರೋಗ್ಯ ಸಹಾಯಕ ಶಶಿಕುಮಾರ್, ಡಿ. ದರ್ಜೆ ನೌಕರ ಕೃಷ್ಣ, ತಂಬಾಕು ನಿಯಂತ್ರಣ ವಿಭಾಗದ ರವಿರಾಜ್, ಪೋಲಿಸ್ ಸಿಬ್ಬಂದಿಗಳಾದ ಚಿಕ್ಕಪ್ಪ, ಅಂತೋಣಿ ಮೋಹನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment