ಕೆ.ಎಂ ಮೇಘರಾಜ್
ಭದ್ರಾವತಿ, ಆ. ೨೨: ಹಳೇನಗರ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಎಂ ಮೇಘರಾಜ್(೬೦) ನಿಧನ ಹೊಂದಿದರು.
ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಬಂಧು-ಬಳಗ ಬಿಟ್ಟಗಲಿದ್ದಾರೆ. ಮೇಘರಾಜ್‌ರವರು ಮೂಲತಃ ವಿದ್ಯಾರ್ಥಿ ಸಂಘಟನೆಯಿಂದ ಬೆಳೆದು ಬಂದಿದ್ದು, ಎಬಿವಿಪಿ ಸಂಘಟನೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ್ದರು. ನಗರದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಮಾರ್ಚ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಹಲವು ವರ್ಷಗಳಿಂದ ತಾಲೂಕು ಗೊಲ್ಲ ಯಾದವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರ ನಿಧನಕ್ಕೆ ಗೊಲ್ಲ ಯಾದವ ಸಮಾಜ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment