ಭದ್ರಾವತಿ ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ಹಾಗು ಸಾಧನ ಮಹಿಳಾ ವೇದಿಕೆ ವತಿಯಿಂದ ಈ ಬಾರಿ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯೋತ್ಸವದಲ್ಲಿ ನಿವೃತ್ತ ಯೋಧ ದಯಾನಂದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಆ. ೧೭: ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ಹಾಗು ಸಾಧನ ಮಹಿಳಾ ವೇದಿಕೆ ವತಿಯಿಂದ ಈ ಬಾರಿ ವಿಶೇಷವಾಗಿ ೭೪ನೇ ಸ್ವಾತಂತ್ರ್ಯೋತ್ಸವ ಅಚರಿಸಲಾಯಿತು.
ಸಮಾರಂಭದಲ್ಲಿ ನಿವೃತ್ತ ಯೋಧ ದಯಾನಂದ್ ಹಾಗು ಬಿ.ಆರ್.ಪಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಟಿ.ಡಿ ಶಶಿಕುಮಾರ್ ವಹಿಸಿದ್ದರು. ಮಹಿಳಾ ವೇದಿಕೆ ಅಧ್ಯಕ್ಷೆ ಅಶ್ವಿನಿ, ಜಯಕರ್ನಾಟಕ ಜಿಲ್ಲಾ ಘಟಕದ ಗೌರವಾಧ್ಯಕ್ಷ ಜಿ.ಆರ್ ತ್ಯಾಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಉಮಾ, ಜಯಕರ್ನಾಟಕ ಸಂಘಟನೆಯ ಹಾಗು ಮಹಿಳಾ ವೇದಿಕೆಯ ಸದಸ್ಯರುಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸಾಧನ ಮಹಿಳೆ ವೇದಿಕೆ ಕಾರ್ಯದರ್ಶಿ ಗುಣಸಾಗರಿ ಸ್ವಾಗತಿಸಿದರು. ಮೀನಾ ವೆಂಕಟೇಶ್ ಪ್ರಾರ್ಥಿಸಿದರು.
No comments:
Post a Comment