ಭದ್ರಾವತಿಯಲ್ಲಿ ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕ ನಂಜಪ್ಪ ನೇತೃತ್ವದಲ್ಲಿ ಶಾಂತಿ ಸಭೆ ಜರುಗಿತು.
ಭದ್ರಾವತಿ, ಆ. ೧೯: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಗಣೇಶೋತ್ಸವ ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಶಾಂತಿಯುತವಾಗಿ ಆಚರಿಸುವಂತೆ ಕೋರಲಾಯಿತು.
ಪೊಲೀಸ್ ನಗರವೃತ್ತ ನಿರೀಕ್ಷಕ ನಂಜಪ್ಪ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಸರ್ಕಾರ ಈ ಬಾರಿ ಗಣೇಶೋತ್ಸವ ಆಚರಿಸಲು ಹಲವು ಷರತ್ತುಗಳೊಂದಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ಅದರಂತೆ ಯಾವುದೇ ರೀತಿಯಲ್ಲೂ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಸಂಘಟನೆಗಳ ಆಯೋಜಕರು ಎಚ್ಚರವಹಿಸಬೇಕೆಂದು ಸೂಚಿಸಲಾಯಿತು.
ಜಿಲ್ಲೆಯಲ್ಲಿ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಎಲ್ಲರೂ ಮಾರ್ಗಸೂಚಿಗಳನ್ನು ತಿಳಿದುಕೊಳ್ಳುವ ಜೊತೆಗೆ ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಕೋರಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾತನಾಡಿ, ಈ ಬಾರಿ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಯಾವ ರೀತಿ ಆಚರಿಸುತ್ತಾರೋ ಅದೇ ರೀತಿ ನಗರದಲ್ಲೂ ಅಚರಿಸುವುದಾಗಿ ತಿಳಿಸಿದರು.
ಮುಖಂಡರಾದ ವಿ. ಕದಿರೇಶ್, ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಗಿರೀಶ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment