ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳೇನಹಳ್ಳಿ ಗ್ರಾಮದ ಕೃಷ್ಣನಾಯ್ಕ ಎಂಬುವರ ಮನೆಯ ಗೋಡೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕುಸಿದು ಬಿದ್ದಿರುವುದು.
ಭದ್ರಾವತಿ, ಆ. ೧೦: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಳೆದ ೪ ದಿನಗಳ ಹಿಂದೆ ತಾಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳೇನಹಳ್ಳಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಕೃಷ್ಣನಾಯ್ಕ ಎಂಬುವರಿಗೆ ಸೇರಿದ ಮನೆ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಮನೆಯ ಇತರೆ ಗೋಡೆಗಳು ಸಹ ಬೀಳುವ ಹಂತದಲ್ಲಿವೆ. ಮನೆ ಗೋಡೆ ಕುಸಿದಿರುವ ಬಗ್ಗೆ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಗಮನಕ್ಕೆ ತರಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಡ ಕುಟುಂಬದವರು ಅಳಲು ವ್ಯಕ್ತಪಡಿಸಿದ್ದಾರೆ.
ತಕ್ಷಣ ಬಡ ಕುಟುಂಬದವರ ನೆರವಿಗೆ ಧಾವಿಸಿ ಮನೆ ಗೋಡೆ ದುರಸ್ತಿಪಡಿಸುವ ಜೊತೆಗೆ ವಾಸಿಸಲು ಅನುಕೂಲ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ.
No comments:
Post a Comment