ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಛೇರ‍್ಮನ್ ಎನ್. ಕೃಷ್ಣಪ್ಪರವರ ಹುಟ್ಟುಹಬ್ಬ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಆ. ೧೪: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಛೇರ‍್ಮನ್ ಎನ್. ಕೃಷ್ಣಪ್ಪರವರ ಹುಟ್ಟುಹಬ್ಬ ಸರಳವಾಗಿ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ತಾಲೂಕು ಶಾಖೆ ಅಧ್ಯಕ್ಷರು ಹಾಗು ಕರ್ನಾಟಕ ರಾಜ್ಯ ಸರ್ಕಾರದ ಜಂಟಿ ಸಮಾಲೋಚನಾ ಸಮಿತಿ ಸದಸ್ಯರಾದ ಎನ್. ಕೃಷ್ಣನಪ್ಪರವರು ವಿದ್ಯಾಸಂಸ್ಥೆಯ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದು, ಇವರ ಸೇವೆ ಇನ್ನಷ್ಟು ಲಭಿಸುವಂತಾಗಲಿ ಎಂದು ಅಭಿನಂದಿಸಲಾಯಿತು.
ಆಡಳಿತ ಮಂಡಳಿಯ ಪ್ರಮುಖರಾದ ರಂಗಸ್ವಾಮಿ, ಎ.ಕೆ ಚಂದ್ರಪ್ಪ, ಸಿ. ಜಯಪ್ಪ, ರಂಗನಾಥಪ್ರಸಾದ್, ಎಂ.ಎಸ್ ಬಸವರಾಜ್, ಶಿವಲಿಂಗೇಗೌಡ ಸೇರಿದಂತೆ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment