ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೧: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕಾರ್ಖಾನೆಯ ಆಕ್ಸಿಜನ್ ಪ್ಲಾಂಟ್ ವೀಕ್ಷಣೆಗೆ ಆಗಮಿಸಿದ್ದ ಸಚಿವರಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ಕಾರ್ಖಾನೆಯಲ್ಲಿ ಯಂತ್ರಗಳು ಚಾಲನೆಯಲ್ಲಿರಲು ಕಚ್ಛಾ ಸಾಮಗ್ರಿ ಆಮದು, ನಿರ್ವಹಣೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸುಮಾರು ೧೯ ಕೋ. ರು. ಅಗತ್ಯವಿದೆ. ಈಗಾಗಲೇ ಈ ಸಂಬಂಧ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ, ಸಂಬಂಧಪಟ್ಟ ಸಚಿವರಿಗೆ, ಶಿವಮೊಗ್ಗ ಲೋಕಸಭಾ ಸದಸ್ಯರಿಗೆ ಮನವಿ ಮಾಡಿ ಒತ್ತಾಯಿಸಲಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ತಕ್ಷಣ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment