ಭದ್ರಾವತಿ, ಆ. ೧೬: ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ನಗರದ ವಿವಿಧೆಡೆ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸರಳವಾಗಿ ಆಚರಿಸಲಾಯಿತು.
ಶಿಕ್ಷಕರಿಂದಲೇ ಪಥ ಸಂಚಲನ:
ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಈ ಬಾರಿ ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇರುವ ಕಾರಣ ಹಾಗು ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಜನರು ಸೇರದಂತೆ ನಿರ್ಬಂಧ ವಿಧಿಸಿರುವ ಹಿನ್ನಲೆಯಲ್ಲಿ ಈ ಬಾರಿ ವಿದ್ಯಾಸಂಸ್ಥೆಯ ಶಿಕ್ಷಕರು ಪಥಸಂಚಲನ ಜವಾಬ್ದಾರಿ ವಹಿಸಿಕೊಂಡು ಯಶಸ್ವಿಗೊಳಿಸಿದ್ದಾರೆ. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕಿಯರಿದ್ದು, ಪಥ ಸಂಚಲನದಲ್ಲಿ ಬೆರಗುಗೊಳಿಸಿದ್ದಾರೆ.
ವಿದ್ಯಾಸಂಸ್ಥೆಯ ಪದನಿಮಿತ್ತ ಛೇರ‍್ಮನ್ ಎನ್. ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಛೇರ‍್ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆಯ ಹಿರಿಯರಾದ ಕೆ. ಶಾಮಣ್ಣ, ಪ್ರಧಾನ ಕಾರ್ಯದರ್ಶಿ ಎ.ಕೆ ಚಂದ್ರಪ್ಪ, ಆಡಳಿತಾಧಿಕಾರಿ ಬಸವರಾಜಪ್ಪ ಉಪಸ್ಥಿತರಿದ್ದರು. ಆರ್. ರವಿ ಸ್ವಾಗತಿಸಿದರು. ಶಶಿಕಲಾ ವಂದಿಸಿದರು. ಚಂದ್ರಕಲಾ ನಿರೂಪಿಸಿದರು.
ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ವನಮಹೋತ್ಸವ:
೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಪ್ರಭಾರಿ ನಂಜುಂಡಸ್ವಾಮಿ, ಕಾರ್ಯದರ್ಶಿ ನಕುಲ್‌ರೇವಣಕರ್, ತಾಲೂಕು ಮಂಡಲ ಕಾರ್ಯದರ್ಶಿ ಕೆ.ಆರ್ ಸತೀಶ್, ಪ್ರಮುಖರಾದ ಧನುಷ್ ಬೋಸ್ಲೆ, ಸಚಿನ್ ವರ್ಣೇಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಿಐಎಸ್‌ಎಲ್ ನಿವೃತ್ತ ನೌಕರರಿಂದ ಸ್ವಾತಂತ್ರ್ಯೋತ್ಸವ :
ನಗರದ ನ್ಯೂಟೌನ್‌ನಲ್ಲಿರುವ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಸಂಘದ ಉಪಾಧ್ಯಕ್ಷ ನರಸಿಂಹಯ್ಯ ಧ್ವಜಾರೋಹಣ ನೆರವೇರಿಸಿದರು. ಸಂಘದ ಪ್ರಮುಖರಾದ ಹನುಮಂತರಾವ್, ಮುಕುಂದಯ್ಯ, ನರಸಿಂಹಚಾರ್, ರವೀಂದ್ರ ರೆಡ್ಡಿ, ಕೆಂಪಯ್ಯ, ಲಾಸರ್, ನಂಜಪ್ಪ, ನಾಗರಾಜ, ಟಾಕಪ್ಪ, ಮಂಜುನಾಥರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕುಂಚ ಕಲಾವಿದರಿಂದ ಸ್ವಾತಂತ್ರ್ಯೋತ್ಸವ :
ನಗರದ ತರೀಕೆರೆ ರಸ್ತೆಯಲ್ಲಿರುವ ತಾಲೂಕು ಕಂಚ ಕಲಾವಿದರ ಸಂಘದ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಗರಸಭೆ ಪೌರಾಯುಕ್ತ ಮನೋಹರ್ ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ಮೊಹಮ್ಮದ್ ಸಮೀವುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಹಳೇನಗರದ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಸಂಘದ ಪ್ರಧಾನ ಕಾರ್ಯದರ್ಶಿ ವಿ. ಚಂದ್ರು, ಹಿರಿಯ ಕಲಾವಿದ ಶಿವು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಖಜಾಂಚಿ ಹಫೀಜ್ ಉರ್ ರಹಮಾನ್ ನಿರೂಪಿಸಿದರು. ಭದ್ರಾವತಿ ಗುರು ವಂದಿಸಿದರು.
ಪೌರಕಾರ್ಮಿಕರಿಂದ ಧ್ವಜಾರೋಹಣ:
ಆಮ್ ಆದ್ಮಿ ಪಾರ್ಟಿ ತಾಲೂಕು ಶಾಖೆ ವತಿಯಿಂದ ತಾಲೂಕು ಕಛೇರಿ ಮುಂಭಾಗದಲ್ಲಿರುವ ಪಕ್ಷದ ಕಛೇರಿಯಲ್ಲಿ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ಈ ಬಾರಿ ಮಹಿಳಾ ಪೌರಕಾರ್ಮಿಕರಾದ ನಂಜಮ್ಮರವರು ಧ್ವಜಾರೋಹಣ ನೆರವೇರಿಸಿದರು. ನಂತರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪ್ರಮುಖರಾದ ಪರಮೇಶ್ವರಚಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಜೋಸೆಫ್, ಮಹಿಳಾ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಪೌರಾಯುಕ್ತರಿಂದ ಸಂವಿಧಾನ ಶಿಲ್ಪಿಗೆ ಮಾಲಾರ್ಪಣೆ:
ನಗರಸಭೆ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಭಾರತರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ನಗರಸಭೆ ಪೌರಾಯುಕ್ತ ಮನೋಹರ್ ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.
ಎಂಪಿಎಂ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ:
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಹಕಾರ ಸಂಘದ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗಿತು.
ಎಂಪಿಎಂ ಎಂಪ್ಲಾಯಿಸ್ ಅಸೋಸಿಯೇಷನ್ ಕಾರ್ಯದರ್ಶಿ ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಸಂಘದ ಕಾರ್ಯದರ್ಶಿ, ನಿರ್ದೇಶಕರುಗಳು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾತಂತ್ರ್ಯೋತ್ಸವ:
ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಪಕ್ಷದ ಖಾಲಿ ಜಾಗದಲ್ಲಿ ನೆರವೇರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ.ಟಿ ನಾಗರಾಜ್, ಜನಾರ್ಧನ, ಎಂ. ಶಿವಕುಮಾರ್, ಬಿ.ಪಿ ರಾಘವೇಂದ್ರ, ದಿಲ್‌ದಾರ್, ಅಮೀರ್‌ಜಾನ್, ಬಿ. ಗಂಗಾಧರ್, ಶಂಕರ್‌ರಾವ್, ಸತೀಶ್, ಅಣ್ಣೋಜಿರಾವ್, ಎ.ಜಿ ರಾಧಮ್ಮ, ಕೃಷ್ಣನಾಯಕ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ:
೭೪ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ತಾಲೂಕಿನ ಹಳ್ಳಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊರೋನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಶಾಲೆಯ ಎಲ್‌ಕೆಜಿ, ಯುಕೆಜಿ ಸಂಸ್ಥಾಪಕರಾದ ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ತಾಲೂಕು ಪಂಚಾಯಿತಿ ಸದಸ್ಯ ಪ್ರೇಮ್‌ಕುಮಾರ್, ಶಾಲೆಯ ಮುಖ್ಯೋಪಾಧ್ಯಾಯ ಕೂಬಾನಾಯ್ಕ ಹಾಗು ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದೆ ರೀತಿ ತಾಲೂಕಿನ ಗೋಣಿಬೀಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಕೊರೋನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಪಂಚಾಯಿತಿ ಸದಸ್ಯರಾದ ಯಶೋಧಮ್ಮ, ಉಷಾಕಿರಣ, ಶಾಲೆಯ ಮುಖ್ಯೋಪಾಧ್ಯಾಯ ಬಸವಕುಮಾರ್ ಹಾಗು ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿರಿಯ ಕಾರ್ಮಿಕನಿಂದ ಧ್ವಜಾರೋಹಣ:
ಕಳೆದ ಸುಮಾರು ೬ ವರ್ಷಗಳಿಂದ ಯಂತ್ರಗಳು ಸ್ಥಗಿತಗೊಂಡು ಮುಚ್ಚಲ್ಪಟ್ಟಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಆಡಳಿತ ಮಂಡಳಿ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಖಾನೆಯ ಮುಖ್ಯದ್ವಾರದಲ್ಲಿ ಜರುಗಿತು.
ಕಾರ್ಖಾನೆಯ ಹಿರಿಯ ಕಾರ್ಮಿಕ ಟಿ.ಜಿ ಬಸವರಾಜಯ್ಯ ಧ್ವಜಾರೋಹಣ ನೆರವೇರಿಸಿದರು. ಹಿರಿಯ ಅಧಿಕಾರಿ ಸತೀಶ್ ಉಪಸ್ಥಿತರಿದ್ದರು. ಭದ್ರತಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಕಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು.
ಛಲವಾದಿ ಸಮಾಜದಿಂದ ಸ್ವಾತಂತ್ರ್ಯೋತ್ಸವ:
ನ್ಯೂಟೌನ್ ಜಯಶ್ರೀ ವೃತ್ತದ ಬಳಿ ಇರುವ ತಾಲೂಕು ಛಲವಾದಿ(ಪರಿಶಿಷ್ಟ) ಸಮಾಜದ ವತಿಯಿಂದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗಿತು.
ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ.ಎಂ ಮಹಾದೇವಯ್ಯ, ಕಾರ್ಯದರ್ಶಿ ಲೋಕೇಶ್, ಹಿರಿಯರಾದ ಎಸ್.ಎಸ್ ಭೈರಪ್ಪ, ಸತೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಛಾಯಗ್ರಾಹಕರ ಸಂಘದಿಂದ ಸ್ವಾತಂತ್ರ್ಯೋತ್ಸವ:
೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ತಾಲೂಕು ಛಾಯಾಗ್ರಾಹಕರ ಸಂಘ ಹಾಗೂ ಪತ್ತಿನ ಸೌಹಾರ್ದ ಸಹಕಾರ ಸಂಘದ ವತಿಯಿಂದ ಆಚರಿಸಲಾಯಿತು.
ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಾಮಕೃಷ್ಣ, ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಮೇಘ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಒಕ್ಕಲಿಗರ ಸಂಘದಿಂದ ಸ್ವಾತಂತ್ರ್ಯೋತ್ಸವ:
ತಾಲೂಕು ಒಕ್ಕಲಿಗರ ಸಂಘ ಹಾಗೂ ಮಹಿಳಾ ವೇದಿಕೆ ವತಿಯಿಂದ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದ ಉದ್ಯಾನವನದಲ್ಲಿ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗಿತು.
ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ ರಮೇಶ್, ಕಾರ್ಯದರ್ಶಿ ಪ್ರಶಾಂತ್, ಸಿ.ಎನ್ ರಾಮಕೃಷ್ಣ, ಮೂರ್ತಿ, ಉಮೇಶ್, ರಾಜಣ್ಣ, ಶ್ರೀನಿವಾಸ್, ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಉಪಾಧ್ಯಕ್ಷೆ ಲೋಹಿತ ನಂಜಪ್ಪ, ಕಾರ್ಯದರ್ಶಿ ಕೆ. ರಾಧಾ, ಶಕುಂತಲಾ ರಾಮಚಂದ್ರ, ಸರಸ್ವತಿ, ಹೇಮಲತಾ, ಗೀತಾ ಕುಮಾರ್, ಗೌರಿ ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ನೀರುಗಂಟಿಗಳಿಗೆ ಸನ್ಮಾನ:
ನಗರದ ಹೊಳೆಹೊನ್ನೂರು ರಸ್ತೆ ಅನ್ವರ್‌ಕಾಲೋನಿಯಲ್ಲಿರುವ ಕೆಜಿಎನ್ ನೌಜವಾನ್ ಕಮಿಟಿಯಿಂದ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ನೀರುಗಂಟಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ಇಂಜಿನಿಯರ್ ಎಸ್.ಆರ್ ಸತೀಶ್, ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖದೀರ್, ಕಮಿಟಿ ಅಧ್ಯಕ್ಷ ಅಸದುಲ್ಲಾ ಖಾನ್, ಉಪಾಧ್ಯಕ್ಷ ಶಾಹಿದ್, ಗೌರವಾಧ್ಯಕ್ಷ ಮುಸ್ತಾಫ್, ಇಮ್ರಾನ್, ಜಹಿರುದ್ದಿನ್ ಹಾಜಿ, ರಂಗ, ಸಲೀಂ ಅಮ್ಜದ್, ಮುನೀರ್ ಅಹಮದ್ ಕುಂಸಿ, ನಜರುಲ್ಲಾ, ಇಬ್ರಾಹಿಂ ಸಾಬ್, ರಿಯಾಜ್ ನದೀಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೇರಳ ಸಮಾಜದ ವತಿಯಿಂದ ಸ್ವಾತಂತ್ರ್ಯೋತ್ಸವ :
ಪ್ರತಿವರ್ಷದಂತೆ ಈ ಬಾರಿ ಸಹ ತಾಲೂಕು ಕೇರಳ ಸಮಾಜಂ ವತಿಯಿಂದ ಸಂಘದ ಕಛೇರಿಯಲ್ಲಿ ೭೪ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ಧ್ವಜಾರೋಹಣದೊಂದಿಗೆ ಪರಸ್ಪರ ಶುಭಾಶಯ ಕೋರಿದರು.
No comments:
Post a Comment