ಎಂ. ಶ್ರೀನಿವಾಸನ್
ಭದ್ರಾವತಿ, ಫೆ. ೨೪: ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ, ದಲಿತ ಮುಖಂಡ ಎಂ. ಶ್ರೀನಿವಾಸನ್(೭೦) ಸೋಮವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಬಳಿ ಇರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ವಿಐಎಸ್‌ಎಲ್ ನಿವೃತ್ತ ಉದ್ಯೋಗಿಯಾಗಿದ್ದ ಶ್ರೀನಿವಾಸನ್ ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ವಾಸವಿದ್ದರು. ಪ್ರಗತಿಪರ ಸಂಘಟನೆಗಳೊಂದಿಗೆ ಗುರುತಿಕೊಳ್ಳುವ ಜೊತೆಗೆ ಹಲವು ದಲಿತ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಇವರ ನಿಧನಕ್ಕೆ ಪ್ರಗತಿಪರ ಸಂಘಟನೆಗಳು ಹಾಗು ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ಮತ್ತು ನಗರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment