ಭದ್ರಾವತಿ, ಆ. ೧: ನಗರಸಭೆ ವ್ಯಾಪ್ತಿಯಲ್ಲಿ ಭಾನುವಾರ ಒಂದೇ ಒಂದು ಕೊರೊನಾ ಸೋಂಕು ಪತ್ತೆಯಾಗಿದ್ದು, ಅಲ್ಲದೆ ಓರ್ವ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.
ಜಟ್‌ಪಟ್ ನಗರದ ೩೧ ವರ್ಷದ ಯುವಕನಿಗೆ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ನಿಗದಿತ ಕೋವಿಡ್ ೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಸುಮಾರು ಒಂದು ವಾರದಿಂದ ೫ಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಸೋಂಕು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ೧೦೦ ಹಾಗು ೨೦೦ ಮೀಟರ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಸೀಲ್‌ಡೌನ್‌ಗೊಳಿಸಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.
ಓರ್ವ ಸಾವು:
ಕೆಲವು ದಿನಗಳ ಹಿಂದೆ ಸೋಂಕಿಗೆ ಒಳಗಾಗಿದ್ದ ನಗರದ ಬಿ.ಎಚ್ ರಸ್ತೆ ಸ್ವೀಟ್ ಅಂಗಡಿಯೊಂದರ ಸುಮಾರು ೪೩ ವರ್ಷದ ಮಾಲೀಕ ಮೃತಪಟ್ಟಿದ್ದಾರೆ.
No comments:
Post a Comment