ವಿ. ಕದಿರೇಶ್
ಭದ್ರಾವತಿ, ಆ. ೨೭: ಬಿಜೆಪಿ ಪಕ್ಷದ ನಗರದ ಇಬ್ಬರು ಹಿರಿಯ ಮುಖಂಡರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ(ಸೂಡ) ಸದಸ್ಯರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಹೊಸಮನೆ ನಿವಾಸಿ, ಹಿರಿಯ ಮುಖಂಡ ವಿ. ಕದಿರೇಶ್‌ರವರನ್ನು ಸದಸ್ಯರನ್ನಾಗಿ ನೇಮಕಗೊಳಿಸಲಾಗಿದ್ದು, ಇವರು ೨ ದಶಕಗಳಿಗೂ ಹೆಚ್ಚು ಕಾಲದಿಂದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಸುಮಾರು ೪ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ಅಲಂಕಸಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಸರ್ಕಾರ ಸೂಡ ಸದಸ್ಯರನ್ನಾಗಿ ನೇಮಕಗೊಳಿಸಿರುವುದು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದೆ.
ಬಿ.ಜೆ ರಾಮಲಿಂಗಯ್ಯ
ಇನ್ನೊಬ್ಬ ಹಿರಿಯ ಮುಖಂಡ ಬಿ.ಜೆ ರಾಮಲಿಂಗಯ್ಯನವರನ್ನು ಸಹ ಸದಸ್ಯರನ್ನಾಗಿ ನೇಮಕಗೊಳಿಸಲಾಗಿದ್ದು, ಇವರು ವಿಐಎಸ್‌ಎಲ್ ನಿವೃತ್ತ ಉದ್ಯೋಗಿಯಾಗಿದ್ದಾರೆ. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
No comments:
Post a Comment