ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ವಿಗ್ರಹವನ್ನು ಅಪವಿತ್ರಗೊಳಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಅಖಿಲ ಭಾರತ ಮಾಧ್ವ ಮಹಾಮಂಡಳಿ ವತಿಯಿಂದ ತಾಲೂಕು ಆಡಳಿತಕ್ಕೆ ಶಿರಸ್ತೇದಾರ್ ಮಂಜಾನಾಯ್ಕ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೧೪: ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ವಿಗ್ರಹವನ್ನು ಅಪವಿತ್ರಗೊಳಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಅಖಿಲ ಭಾರತ ಮಾಧ್ವ ಮಹಾಮಂಡಳಿ ವತಿಯಿಂದ ತಾಲೂಕು ಆಡಳಿತಕ್ಕೆ ಶಿರಸ್ತೇದಾರ್ ಮಂಜಾನಾಯ್ಕ ಮೂಲಕ ಮನವಿ ಸಲ್ಲಿಸಲಾಯಿತು.
ಶೃಂಗೇರಿ ಶ್ರೀ ಕ್ಷೇತ್ರ ಸಕಲ ಬ್ರಾಹ್ಮಣ ಸಮಾಜದವರಿಗೆ ಹಾಗು ಆಸ್ತಿಕರಿಗೆ ಧಾರ್ಮಿಕ ಸ್ಥಳವಾಗಿದ್ದು, ಇತ್ತೀಚೆಗೆ ಕೆಲವು ಕಿಡಿಗೇಡಿಗಳು ವಿಗ್ರಹ ಅಪವಿತ್ರಗೊಳಿಸಿರುತ್ತಾರೆ. ಈ ಘಟನೆಯನ್ನು ಮಹಾಮಂಡಳಿ ಉಗ್ರವಾಗಿ ಖಂಡಿಸುತ್ತದೆ. ಶೀಘ್ರವಾಗಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ಪ್ರಮುಖರಾದ ಜಯತೀರ್ಥ, ನರಸಿಂಹಚಾರ್, ರಮಾಕಾಂತ, ಕೇಶವಮೂರ್ತಿ, ರಾಘವೇಂದ್ರ, ಪವನ್ ಉಡುಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment