ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಗುರುವಾರ ನಡೆಯಿತು.
ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸದೆ ಚಿಕಿತ್ಸೆ ನೀಡಿ
ಭದ್ರಾವತಿ, ಆ. ೧೩: ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವಿರುದ್ಧ ತಾಲೂಕು ಪಂಚಾಯಿತಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಮಾತನಾಡಿದ ಹಿರಿಯ ಸದಸ್ಯ ಧರ್ಮೇಗೌಡ ೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಆದರೂ ಸಹ ಬಡವರಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ. ಸೂಕ್ತ ವೈದ್ಯರಿಲ್ಲ, ಮತ್ತೊಂದಿಲ್ಲ ಎಂಬ ಕಾರಣ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು.
ಸದಸ್ಯ ಮಂಜುನಾಥ್ ಮಾತನಾಡಿ, ಆಸ್ಪತ್ರೆಗೆ ಕೋಟ್ಯಾಂತರ ರು. ವೆಚ್ಚದಲ್ಲಿ ಸೌಲಭ್ಯಗಳನ್ನು ಕಲ್ಪಿಸಿರುವುದು ವ್ಯರ್ಥವಾಗಿದೆ. ಆಸ್ಪತ್ರೆಗೆ ಬರುವ ಬಡವರ ಗೋಳು ಕೇಳದಂತಾಗಿದೆ. ವಿನಾಕಾರಣ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಗೆ ಹೋಗುವ ಬದಲು ನಗರದಲ್ಲಿಯೇ ಯಾವುದಾದರೂ ಖಾಸಗಿ ಆಸ್ಪತ್ರೆಯಲ್ಲಿ ಸಾಲಸೋಲ ಮಾಡಿ ಚಿಕಿತ್ಸೆ ಪಡೆದುಕೊಳ್ಳುವ ಮನಸ್ಥಿತಿಗೆ ಬಡವರ್ಗದವರು ಬಂದು ಬಿಟ್ಟಿದ್ದಾರೆ. ಆಸ್ಪತ್ರೆ ಸಾಲ ತೀರಿಸಲಾಗದ ಎಷ್ಟೋ ಕುಟುಂಬ ಬೀದಿಗೆ ಬಿದ್ದಿವೆ. ಇವೆಲ್ಲವನ್ನು ಗಮನಿಸಿದಾಗ ಸರ್ಕಾರಿ ಆಸ್ಪತ್ರೆಯವರು ನಗರದ ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗಿರುವ ಅನುಮಾನ ಕಂಡು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಸ್ಪತ್ರೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಸಭೆಯಲ್ಲಿ ವಿವರಿಸಿದರು. ಆದರೆ ಸದಸ್ಯರು ಪುನಃ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯಿಂದ ಕೈಗೊಂಡಿರುವ ಕಾರ್ಯಗಳನ್ನು ವಿವರಿಸಿದರು. ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು.
ಉಪಾಧ್ಯಕ್ಷೆ ನೇತ್ರಾಬಾಯಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್ ಉಪಸ್ಥಿತರಿದ್ದರು. ಸದಸ್ಯರಾದ ಆಶಾ ಶ್ರೀಧರ್, ತುಂಗಮ್ಮ ಜಯಪ್ಪ, ಗೀತಾ ಜಗದೀಶ್, ಕೆ.ವಿ ರುದ್ರಪ್ಪ, ಅಣ್ಣಾಮಲೈ, ಉಷಾಕಿರಣ, ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Howdu idu nijavada vishaya
ReplyDeleteHowdu idu nijavada vishaya
ReplyDelete