Wednesday, August 5, 2020

ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭದ್ರಾವತಿ, ಆ. ೫: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಈ ಇಬ್ಬರು ರಾಜಕೀಯ ಪ್ರಮುಖರು ಸೇರಿದಂತೆ ಸೋಂಕಿಗೆ ಒಳಗಾಗಿರುವ ಎಲ್ಲರೂ ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಿ ಬುಧವಾರ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಶಾಸಕ ಬಿ.ಕೆ.ಸಂಗಮೇಶ್ವರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಉದಯ್‌ಕುಮಾರ್, ನಿರಂಜನ್, ಮುಖಂಡರಾದ ಬಿ.ಎಸ್ ಗಣೇಶ್, ಚನ್ನಪ್ಪ, ಫ್ರಾನ್ಸಿಸ್, ಶಿವಕುಮಾರ್, ರಾಮಕೃಷ್ಣೇ ಗೌಡ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.. 

No comments:

Post a Comment