ಭದ್ರಾವತಿ, ಆ. ೨೫: ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರಸಭೆ, ಮೆಸ್ಕಾಂ ಹಾಗು ಅರಣ್ಯ ಇಲಾಖೆ ಸಹಯೋಗದೊಂದಿಗೆ ಆನೆಕೊಪ್ಪದಲ್ಲಿರುವ ಎಂಪಿಎಂ ಬಡಾವಣೆಯಲ್ಲಿ ಆ.೨೭ರಂದು ಬೆಳಿಗ್ಗೆ ೧೧.೩೦ಕ್ಕೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಪೌರಾಯುಕ್ತ ಮನೋಹರ್, ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಎಸ್ ಸತೀಶ್‌ಚಂದ್ರ ಮತ್ತು ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್ ಉಪಸ್ಥಿತರಿರುವರು.
No comments:
Post a Comment