ಮಂಗಳವಾರ, ಸೆಪ್ಟೆಂಬರ್ 1, 2020

ಚಿರತೆ ಉಗುರು ಮಾರಾಟಕ್ಕೆ ಯತ್ನ : ಓರ್ವನ ಸೆರೆ

ಚಿರತೆ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ, ಸೆ. ೧: ಚಿರತೆ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
      ಶಿವಮೊಗ್ಗ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿ ಸೂರತ್ ಎಂಬಾತ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಚಿರತೆ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಬಂಧಿತನಿಂದ ೪ ಚಿರತೆ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಖಚಿತ ಮಾಹಿತಿ ಆಧಾರದ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ ಸುಬ್ರಮಣ್ಯ, ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್ ನೇತೃತ್ವದ ತಂಡದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನವೀನ್, ರಶೀದ್, ಸೋನು, ಭಾಸ್ಕರ್, ಶಿವು, ಶೇಖರ್ ಆಶಚೌಗಲೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

1 ಕಾಮೆಂಟ್‌: