ಶಿವಮೊಗ್ಗ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿರುವ ಪಾಪನಾಯಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಭದ್ರಾವತಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಡಿ.ಜೆ ನಾಗರಾಜ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೮: ಶಿವಮೊಗ್ಗ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿರುವ ಪಾಪನಾಯಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ತಹಸೀಲ್ದಾರ್ ಡಿ.ಜೆ ನಾಗರಾಜ್‌ಗೆ ಮನವಿ ಸಲ್ಲಿಸಲಾಯಿತು.
ಪಾಪನಾಯಕ ಬಡ ಕುಟುಂಬದ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಅವರ ಪತ್ನಿ ಸವಿತಾರವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಬೇಕು. ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಮೃತಪಟ್ಟ ಕೊರೋನಾ ವಾರಿಯರ್ಸ್‌ಗೆ ನೀಡುವಂತೆ ೩೦ ಲಕ್ಷ ರು. ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು. ಯುವಕರ ಸಂಘದ ಅಧ್ಯಕ್ಷ ಕೃಷ್ಣ ನಾಯಕ ನೇತೃತ್ವ ವಹಿಸಿದ್ದರು.
No comments:
Post a Comment