ಮುನ್ನಚ್ಚರಿಕೆ ವಹಿಸಲು ಸ್ಥಳೀಯ ನಿವಾಸಿಗಳಿಗೆ ಸೂಚನೆ
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಜಲಾವೃತಗೊಳ್ಳುವ ತಗ್ಗು ಪ್ರದೇಶಗಳಿಗೆ ನಗರಸಭೆ ಅಧಿಕಾರಿಗಳನ್ನೊಳಗೊಂಡ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭದ್ರಾವತಿ, ಸೆ. ೨: ನಗರಸಭೆ ವ್ಯಾಪ್ತಿಯಲ್ಲಿ ಜಲಾವೃತಗೊಳ್ಳುವ ತಗ್ಗು ಪ್ರದೇಶಗಳಿಗೆ ನಗರಸಭೆ ಅಧಿಕಾರಿಗಳನ್ನೊಳಗೊಂಡ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪೌರಾಯುಕ್ತ ಮನೋಹರ್ ಮಾರ್ಗದರ್ಶನದಲ್ಲಿ ನಗರಸಭೆ ಪರಿಸರ ಅಭಿಯಂತರ ರಕ್ಷಿತ್, ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಸೂಪರ್‌ವೈಸರ್ ಎನ್. ಗೋವಿಂದ ಹಾಗು ವೈ.ಕೆ ಮಂಜುನಾಥ ಅವರನ್ನೊಳಗೊಂಡ ತಂಡ ನಗರಸಭೆ ವ್ಯಾಪ್ತಿಯ ದೊಣಬಘಟ್ಟ ರಸ್ತೆಯ ಕವಲಗುಂದಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಿಂಭಾಗದ ಹೆಬ್ಬಂಡಿ ಗ್ರಾಮದ ಎ.ಕೆ ಕಾಲೋನಿ, ಎಂಪಿಎಂ ರಸ್ತೆಯಲ್ಲಿರುವ ಸುರಗಿತೋಪು, ಜನ್ನಾಪುರ ಕೆ.ಸಿ ಬ್ಲಾಕ್, ಜನ್ನಾಪುರ ಕೆರೆ ಹಾಗು ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ತಗ್ಗು ಪ್ರದೇಶದ ನಿವಾಸಿಗಳಿಗೆ ಮುನ್ನಚ್ಚರಿಕೆ ವಹಿಸುವಂತೆ ಹಾಗು ತುರ್ತು ಸಂದರ್ಭದಲ್ಲಿ ಸಹಾಯವಾಣಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಸೂಚಿಸಲಾಯಿತು.
ಮಂಗಳವಾರ ಸಂಜೆ ನಗರದಲ್ಲಿ ಸುರಿದ ಮಳೆಯಿಂದಾಗಿ ಕೆಲವು ಭಾಗದ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಇದರಿಂದಾಗಿ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
No comments:
Post a Comment