ಭದ್ರಾವತಿಯಲ್ಲಿ ರೋಟರಿ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶಿಕ್ಷಕರ ದಿನಾಚರಣೆ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸರಳವಾಗಿ ಜರುಗಿತು. ೫ ಜನ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಸೆ. ೧೦: ನಗರದ ರೋಟರಿ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶಿಕ್ಷಕರ ದಿನಾಚರಣೆ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸರಳವಾಗಿ ಜರುಗಿತು.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪೂರ್ವ ಪ್ರಾಥಮಿಕ ಕೇಂದ್ರದ ಶಿಕ್ಷಕಿ ಸೌಭಾಗ್ಯ, ಪ್ರಾಥಮಿಕ ಶಾಲೆ ಶಿಕ್ಷಕಿ ಮೀನಾಕ್ಷಿ, ಪ್ರೌಢಶಾಲೆ ಶಿಕ್ಷಕ ಗಣೇಶ್, ಆನಂದ ಮಾರ್ಗ ಶಾಲೆಯ ಇಬ್ಬರು ಅಚಾರ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜೋನಲ್ ಲೆಫ್ಟಿನೆಂಟ್ ಡಾ. ಕೆ ನಾಗರಾಜ್, ಪ್ರಮುಖರಾದ ಕೆ.ಬಿ ಪ್ರಭಾಕರ ಬೀರಯ್ಯ, ತೀರ್ಥಯ್ಯ, ಪಿ.ಸಿ ಜೈನ್, ಅಡವೀಶಯ್ಯ, ರಾಘವೇಂದ್ರ ಉಪಾಧ್ಯಾಯ, ಸುಂದರ್ ಬಾಬು, ದುಷ್ಯಂತ್‌ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment