ಭದ್ರಾವತಿ, ಸೆ. ೩೦: ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್ ಪಟೇಲ್‌ರವರ ೯೧ನೇ ಜನ್ಮದಿನ ಅ.೪ರಂದು ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್ ಪಟೇಲ್‌ರವರ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದ ದಿವ್ಯಸಾನಿಧ್ಯ ಸರ್ವಧರ್ಮಪೀಠದ ನಿರಂಜನ ದೇಶಿ ಕೇಂದ್ರ ಸ್ವಾಮೀಜಿ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜೆಡಿಯು ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್ ಕೋರಿದ್ದಾರೆ.
No comments:
Post a Comment