Tuesday, September 1, 2020

ಶಿವಾಜಿ ಮಹಾರಾಜರಿಗೆ ಅವಮಾನ : ಸೂಕ್ತ ಕ್ರಮಕ್ಕೆ ಆಗ್ರಹ

ಬೆಳಗಾವಿ ಪೀರನವಾಡಿ ಗ್ರಾಮದ ಪ್ರತಿಮೆ ವಿವಾದದಲ್ಲಿ ವಿನಾಕಾರಣ ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿರುವುದನ್ನು ಖಂಡಿಸಿ ಭದ್ರಾವತಿಯಲ್ಲಿ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧: ಬೆಳಗಾವಿ ಪೀರನವಾಡಿ ಗ್ರಾಮದ ಪ್ರತಿಮೆ ವಿವಾದದಲ್ಲಿ ವಿನಾಕಾರಣ ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿರುವುದನ್ನು ನಗರದ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘ ಖಂಡಿಸಿದೆ.
        ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದ್ದು, ಕೇವಲ ಮರಾಠ ಸಮಾಜಕ್ಕೆ ಮಾತ್ರ ಸೀಮಿತವಾಗದೆ ಇಡೀ ದೇಶಕ್ಕೆ ಶಿವಾಜಿ ಮಹಾರಾಜರು ಆದರ್ಶಪ್ರಾಯರಾಗಿದ್ದಾರೆ. ಈ ಹಿನ್ನಲೆಯಲ್ಲಿ ಶಿವಾಜಿ ಮಹಾರಾಜರನ್ನು ಅವಮಾನಿಸಿರುವವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ  ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
     ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಪ್ರಮುಖರಾದ ಪ್ರಕಾಶ್‌ರಾವ್ ದುರೆ, ಸಚಿನ್ ಸಿಂಧ್ಯಾ, ಲೋಕೇಶ್ವರ್ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment