ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರಸಭೆ ವ್ಯಾಪ್ತಿಯ ಹೊಸಮನೆ ಅಶ್ವಥ್‌ನಗದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
ಭದ್ರಾವತಿ, ಸೆ. ೨೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರಸಭೆ ವ್ಯಾಪ್ತಿಯ ಹೊಸಮನೆ ಅಶ್ವಥ್‌ನಗದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
ಯೋಜನೆ ವತಿಯಿಂದ ಪರಿಸರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ತಾಲೂಕು ಯೋಜನಾಧಿಕಾರಿ ಕೆ. ಪ್ರಸಾದ್, ಮೇಲ್ವಿಚಾರಕಿ ನೇತ್ರಾಬಾಯಿ, ಕೃಷಿ ವಿಭಾಗದ ಮೇಲ್ವಿಚಾರಕ ಗೋವಿಂದಪ್ಪ, ಈ ಭಾಗದ ಒಕ್ಕೂಟದ ಅಧ್ಯಕ್ಷೆ ಕಾವೇರಮ್ಮ ಸೇರಿದಂತೆ ಸೇವಾ ಪ್ರತಿನಿಧಿಗಳು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
No comments:
Post a Comment