ಸಂಸದ ಬಿ.ವೈ ರಾಘವೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆ
ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ
ಭದ್ರಾವತಿ, ಸೆ. ೨೮: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ೨೨೦ ಕಾರ್ಮಿಕರನ್ನು ಕಾಯಂಗೊಳಿಸುವ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಶಿವಮೊಗ್ಗದ ಅತಿಥಿ ಗೃಹದಲ್ಲಿ ಸಂಸದ ಬಿ.ವೈ ರಾಘವೇಂದ್ರರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಎಂಪಿಎಂ ಕಾರ್ಖಾನೆಯಲ್ಲಿ ೨೦೧೭ರ ಸ್ವಯಂ ನಿವೃತ್ತಿ ಯೋಜನೆ ನಂತರ ಬಾಕಿ ಇರುವ ೨೨೦ ಕಾರ್ಮಿಕರ ಪೈಕಿ ಈಗಾಗಲೇ ೧೨೫ ಕಾರ್ಮಿಕರನ್ನು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಉಳಿದಿರುವ ೯೩ ಕಾರ್ಮಿರನ್ನು ಸಹ ವಿವಿಧ ನಿಗಮ-ಮಂಡಳಿಗಳಲ್ಲಿ ನಿಯೋಜನೆ ಮೇಲೆ ನೇಮಕಗೊಳಿಸುವಂತೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್‌ರವರಿಗೆ ಸರ್ಕಾರ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.
ಎಲ್ಲಾ ಕಾರ್ಮಿಕರನ್ನು ನಿಯೋಜನೆ ಮೇಲೆ ತೆರಳಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟು ಆ ಇಲಾಖೆಯಲ್ಲಿಯೇ ವಿಲೀನಗೊಳಿಸಿದಾಗ ಮಾತ್ರ ಸರ್ಕಾರದ ನಿರ್ಧಾರದಂತೆ ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯ. ಈ ಹಿನ್ನಲೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಲಾಯಿತು. ಸಭೆಯಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಬಿ ಶಿವಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಎಂಪಿಎಂ ಕಾರ್ಖಾನೆ ವಿವಿಧ ಕಾರ್ಮಿಕ ಸಂಘಟನೆಗಳು ಮುಖಂಡರು ಪಾಲ್ಗೊಂಡಿದ್ದರು.
No comments:
Post a Comment