ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರಿಡಲು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೫: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಶನಿವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೩೦ ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡುವ ಮೂಲಕ ದೀನ ದಲಿತರ, ಬಡವರ ಆಶಾಕಿರಣವಾಗಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ನೆನಪು ಜನಮಾನಸದಲ್ಲಿ ಉಳಿದಿದ್ದು, ಅವರ ಸೇವೆಯನ್ನು ಸ್ಮರಿಸುವ ಮೂಲಕ ಅವರಿಗೆ ಗೌರವ ಸೂಚಿಸುವ ಹಿನ್ನಲೆಯಲ್ಲಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಾರ್ಯಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಂಖಾನ್ , ಸಂಚಾಲಕರಾದ ಗಾಯಕ್‌ವಾಡ್, ಸುಬ್ಬೇಗೌಡ, ಸೀನಪ್ಪ, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
"ವಿಶ್ವಮಾನ್ಯ ವಿಶ್ವೇಶ್ವರಯ್ಯ ನಿಲ್ದಾಣ" ಭದ್ರಾವತಿ ಬಸ್ ನಿಲ್ದಾಣಕ್ಕೆ
ReplyDeleteಸೂಕ್ತ ಹೆಸರು ಎಂದು ನನ್ನ ಅಭಿಪ್ರಾಯ.
(ಭದ್ರಾವತಿಗೆ ಒಂದು ಹೆಸರು ತಂದವರೇ ವಿಶ್ವೇಶ್ವರಯ್ಯನವರು)
S
ReplyDeleteSir M.V.
ReplyDelete