ಭದ್ರಾವತಿ, ಸೆ. ೧೫: ತಾಲೂಕು ಪ್ರಭಾರ ದಂಡಾಧಿಕಾರಿಯಾಗಿ ತಹಸೀಲ್ದಾರ್ ಡಿ.ಜೆ ನಾಗರಾಜ್ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಡಿ.ಜೆ ನಾಗರಾಜ್‌ರವರು ಪ್ರಸ್ತುತ ಶಿವಮೊಗ್ಗ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಈ ಹಿಂದಿನ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ರವರನ್ನು ದಿಢೀರನೆ ಜಿಲ್ಲಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆಗೊಳಿಸಿದ ಹಿನ್ನಲೆಯಲ್ಲಿ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಎಚ್.ಸಿ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು:
ಸಚಿವಾಲಯದಿಂದ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್.ಸಿ ಶಿವಕುಮಾರ್ ವಿರುದ್ಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.
No comments:
Post a Comment