ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಲ್ಲಿಹಾಳು ಕ್ಷೇತ್ರದ ಸದಸ್ಯ ಎಂ. ನಾಗರಾಜ್ ಆಯ್ಕೆಯಾಗಿದ್ದು, ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರನ್ನು ಅಭಿನಂದಿಸಲಾಯಿತು.
ಭದ್ರಾವತಿ, ಸೆ. ೧೫: ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಲ್ಲಿಹಾಳು ಕ್ಷೇತ್ರದ ಸದಸ್ಯ ಎಂ. ನಾಗರಾಜ್ ಆಯ್ಕೆಯಾದರು.
ತಾಲೂಕು ಪಂಚಾಯಿತಿಯಲ್ಲಿ ಪ್ರಸ್ತುತ ಚುನಾಯಿತ ಸದಸ್ಯರ ಅಧಿಕಾರ ಅವಧಿ ಸುಮಾರು ೮ ತಿಂಗಳು ಬಾಕಿ ಉಳಿದಿದ್ದು, ಈ ಅವಧಿಗೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಎಂ. ನಾಗರಾಜ್‌ರವರು ಆಯ್ಕೆಯಾಗಿರುವುದನ್ನು ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಘೋಷಿಸಿದರು.
ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಧಿಕಾರ ಹಂಚಿಕೊಂಡಿದ್ದು, ಪ್ರಸ್ತುತ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ೨ ಸ್ಥಾನಗಳು ಜೆಡಿಎಸ್ ಸದಸ್ಯರ ಪಾಲಾಗಿವೆ. ಸ್ಥಾಯಿ ಸಮಿತಿ ಸ್ಥಾನ ಮಾತ್ರ ಈ ಹಿಂದೆ ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿ ಮತ್ತು ಕರಿಯಣ್ಣರವರು ಮಾಡಿಕೊಂಡಿದ್ದ ಹಂಚಿಕೆ ಸೂತ್ರದಂತೆ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ.
ಉಪಾಧ್ಯಕ್ಷೆ ನೇತ್ರಾಬಾಯಿ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಕಾರ್ಯನಿರ್ವಾಹಣಾಧಿಕಾರಿ ಡಾ. ಜಿ. ಮಂಜುನಾಥ್, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಸದಸ್ಯರಾದ ಧರ್ಮೇಗೌಡ, ಆರ್. ತಿಪ್ಪೇಶ್‌ರಾವ್, ಅಣ್ಣಾಮಲೈ, ಗೀತಾ ಜಗದೀಶ್, ಎಚ್.ಎಂ. ಪ್ರೇಮ್‌ಕುಮಾರ್, ಯಶೋದಮ್ಮ, ಎಂ.ಜಿ ದಿನೇಶ್, ಕೆ.ವಿ ರುದ್ರಪ್ಪ ಮತ್ತು ಆಶಾ ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment