ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ಸದಾ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜನರ ಮೆಚ್ಚುಗೆಗೆ ಪಾತ್ರರಾಗಿರುವ ನಗರಸಭೆ ಪೌರಾಯುಕ್ತ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರಸಭೆ ಪೌರಾಯುಕ್ತರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದು, ನಗರದ ಬೆಳವಣಿಗೆಗೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಹಗಲಿರುಳು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ಇತ್ತೀಚೆಗೆ ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಅವರೊಂದಿಗೆ ನಗರಸಭೆ ವ್ಯಾಪ್ತಿಯ ಸುಮಾರು ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಕಾರ್ಯದಲ್ಲೂ ತೊಡಗಿದ್ದರು.
ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿರುವ ಮನೋಹರ್ ಹಾಗು ಕುಟುಂಬ ವರ್ಗ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಎನ್.ಎಸ್ ಕೃಷ್ಣಮೂರ್ತಿ ಸೋಮಯಾಜಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ಪ್ರಮುಖರಾದ ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ರಮಾವೆಂಕಟೇಶ್, ಶೈಲಜ ರಾಮಕೃಷ್ಣ, ದೇವಿಕಾ ನಗರಾಜ್, ಹೇಮಾ ಕೃಷ್ಣಮೂರ್ತಿ, ಶ್ರೀಲಕ್ಷ್ಮಿ ಚಿದಂಬರ, ಗ್ಸೇವಿಯರ್, ಮಹಮ್ಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment