ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಶಾಖೆ ವತಿಯಿಂದ ಅಧ್ಯಕ್ಷೆ ಸುಶೀಲಬಾಯಿ ನೇತೃತ್ವದಲ್ಲಿ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ರಂಗಮ್ಮ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಶಾಖೆ ವತಿಯಿಂದ ಅಧ್ಯಕ್ಷೆ ಸುಶೀಲಬಾಯಿ ನೇತೃತ್ವದಲ್ಲಿ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ರಂಗಮ್ಮ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ/ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು ಮತ್ತು ಐಸಿಡಿಎಸ್ ಯೋಜನೆಯನ್ನು ಉಳಿಸಿಕೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿದ ಮಕ್ಕಳಿಗೆ ಪ್ರಾಥಮಿಕ ಶಾಲೆಗೆ ದಾಖಲಿಸಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪ್ರಮಾಣ ಪತ್ರ ನೀಡುವಂತೆ ಕ್ರಮ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾಗಿ ಒಂದು ವರ್ಷ ಕಳೆದರೂ ಸಹ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಮಸ್ಯೆಗಳಿಗೆ ಸ್ಪಂದಿಸದ ಹಿನ್ನಲೆಯಲ್ಲಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕೆಂದು ಒತ್ತಾಯಿಸಲಾಯಿತು.
ರಾಜ್ಯದಲ್ಲಿ ಸುಮಾರು ೪೫ ವರ್ಷಗಳಿಂದ ಕಾರ್ಯಕರ್ತೆ ಮತ್ತು ಸಹಾಯಕಿಯರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ತಕ್ಷಣ ಕಾಯಂಗೊಳಿಸಬೇಕು. ನಿವೃತ್ತಿ ಹೊಂದಿರುವವರಿಗೆ ನಿವೃತ್ತಿ ವೇತನ ಜಾರಿಗೊಳಿಸಬೇಕು. ಎನ್‌ಪಿಎಸ್ ಯೋಜನೆಯ ಹಣ ತಕ್ಷಣ ನೀಡಬೇಕು. ಕೊರೋನಾ ವಾರಿಯರ್‍ಸ್‌ಗಳಾಗಿ ಸೇವೆ ಸಲ್ಲಿಸಿ ಮೃತಪಟ್ಟಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕುಟುಂಬಗಳಿಗೆ ತಕ್ಷಣ ಸರ್ಕಾರ ನಿಗದಿ ಪಡಿಸಿರುವಂತೆ ೩೦ ಲಕ್ಷ ರು. ಪರಿಹಾರ ನೀಡಬೇಕೆಂದು ಆಗ್ರಹಿಸಲಾಯಿತು.
ಫೆಡರೇಷನ್ ಪ್ರಮುಖರಾದ ಸುಶೀಲಾ ಬದನೆಹಾಳ್, ಆರ್. ಭಾಗ್ಯಮಣಿ, ಕೆ.ಸಿ ವಿಶಾಲಾ, ಜಿ.ಕೆ ಸುಲೋಚನಾ ಮತ್ತು ಆರ್. ವೇದಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment