ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಸೆ. ೨೦: ಶಾಸಕ ಬಿ.ಕೆ ಸಂಗಮೇಶ್ವರ್‌ಗೂ ಕೊರೋನಾ ಸೋಂಕು ತಗುಲಿದ್ದು, ಭಾನುವಾರ ಸಂಜೆ ದಿಢೀರನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ೨ ದಿನಗಳ ಹಿಂದೆ ಮನೆಯಲ್ಲಿ ಕೆಲಸ ಮಾಡುವ ೪ ಮಂದಿ ಕೆಲಸಗಾರರಲ್ಲಿ ಕೊರೋನಾ ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಂಗಮೇಶ್ವರ್ ಮತ್ತು ಸಹೋದರ್ ಬಿ.ಕೆ ಮೋಹನ್ ನಿವಾಸಗಳನ್ನು ಸೀಲ್‌ಡೌನ್ ಮಾಡಲಾಗಿತ್ತು.
ಈ ನಡುವೆ ಕೊರೋನಾ ತಪಾಸಣೆ ವರದಿಯಲ್ಲಿ ಸಂಗಮೇಶ್ವರ್‌ಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
No comments:
Post a Comment