ಭದ್ರಾವತಿ, ಸೆ. ೨೪: ಲೋಯರ್ ಹುತ್ತಾ, ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ ವತಿಯಿಂದ ಸೆ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ಲೋಯರ್ ಹುತ್ತಾ ಬಿ.ಎಚ್ ರಸ್ತೆ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ 'ಎಂ.ಜೆ ಅಪ್ಪಾಜಿ ಒಂದು ನೆನಪು' ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಜಿ ಶಾಸಕ ವೈ.ಎಸ್.ವಿ ದತ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕಿ ಶಾರದಾಪೂರ್‍ಯಾನಾಯ್ಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ, ಜೆಡಿಎಸ್ ರಾಜ್ಯ ಮುಖಂಡ ಎಂ. ಶ್ರೀಕಾಂತ್, ಹಿರಿಯ ಮುಖಂಡರಾದ ಕೆ. ಕರಿಯಪ್ಪ, ಆರ್. ಕರುಣಾಮೂರ್ತಿ, ಅಪ್ಪಾಜಿ ಪುತ್ರ ಎಂ.ಎ ಅಜಿತ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮಾಜಿ ನಗರಸಭಾ ಸದಸ್ಯ ಎಸ್.ಪಿ ಮೋಹನ್‌ರಾವ್ ಕೋರಿದ್ದಾರೆ.
No comments:
Post a Comment