Sunday, September 20, 2020

ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಿ.ಡಿ ನಟರಾಜ್ ನಿಧನ

ಜಿ.ಡಿ ನಟರಾಜ್
ಭದ್ರಾವತಿ, ಸೆ.೨೦: ನಗರದ ಗಣೇಶ್ ಕಾಲೋನಿ ನಿವಾಸಿ, ನಗರಸಭಾ ಸದಸ್ಯ ಜಿ.ಡಿ ನಟರಾಜ್(೪೯) ಶನಿವಾರ ರಾತ್ರಿ ನಿಧನ ಹೊಂದಿದರು.
      ಮೃತರು ತಾಯಿ, ಪತ್ನಿ, ೩ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮಾಜಿ ಶಾಸಕ ದಿಂಗತ ಎಂ.ಜೆ ಅಪ್ಪಾಜಿ ಅವರೊಂದಿಗೆ ಗುರುತಿಸಿಕೊಂಡು ಜೆಡಿಎಸ್ ಪಕ್ಷದಿಂದ ೨ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
        ಹಲವು ವರ್ಷಗಳಿಂದ ನ್ಯಾಯಬೆಲೆ ಅಂಗಡಿ ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದು, ತಾಲೂಕು ಪಡಿತರ ವಿತರಕರ ಸಂಘದ ಉಪಾಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.
       ಇವರ ನಿಧನಕ್ಕೆ ತಾಲೂಕು ಪಡಿತರ ವಿತರಕರ ಸಂಘ, ನಗರಸಭಾ ಸದಸ್ಯರು, ಜೆಡಿಎಸ್ ಪಕ್ಷದ ಮುಖಂಡರು, ನಗರದ ಗಣ್ಯರು, ತಾಲೂಕು ಮಡಿವಾಳ ಸಮಾಜ, ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
      ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ:
     ಮೃತರ ನಿಧನಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ, ಜಿ.ಡಿ ನಟರಾಜ್‌ರವರು ನಿಧನ ಹೊಂದಿರುವ ವಿಷಯ ಮನಸ್ಸಿಗೆ ತುಂಬಾ ದುಃಖವನ್ನುಂಟು ಮಾಡಿದೆ. ಒಳ್ಳೆಯ ವ್ಯಕ್ತಿಯಾಗಿದ್ದು, ಎಲ್ಲಾ ಕೆಲಸಗಳಲ್ಲೂ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದರು. ಇವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.
      ಇದೀಗ ವಿಧಾನಸಭೆ ಅಧಿವೇಶನ ಆರಂಭಗೊಳ್ಳುತ್ತಿದ್ದು, ಜಿ.ಡಿ ನಟರಾಜ್‌ರವರ ಕುಟುಂಬಕ್ಕೆ ಆರ್ಥಿಕ ನೆರವು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದರು.


No comments:

Post a Comment